ಬೆಂಗಳೂರು:ಕರಾವಳಿ ಕರ್ನಾಟಕದಲ್ಲಿ ಭಾನುವಾರದವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವೆಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಎಲ್ಲೆಡೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ತೀವ್ರ ಮಳೆ ಕೊರತೆ ಎದುರಾಗಿದೆ. ಈ ವರ್ಷ ರಾಜ್ಯದಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.