ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹೀತ ಮಳೆಯಾಗುತಿದೆ. ಕರಾವಳಿ ಜಿಲ್ಲೆಗಳಲ್ಲಿ ಅ.25ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ
24 ಗಂಟೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು, ಮತ್ತು ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.