ಮಂಗಳೂರು:ಕರಾವಳಿಯ ದ.ಕ ಉಡುಪಿ ಕಾಸರಗೋಡು ಜಿಲ್ಲೆಗಳಲ್ಲಿ ಮೋಡ – ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಸಂಜೆ ಪೂರ್ವದ ಮೋಡದಿಂದ ಸುಳ್ಯ ಬೆಳ್ತಂಗಡಿ ತಾಲ್ಲೂಕುಗಳ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉ.ಕ. ಜಿಲ್ಲೆಯ ಶಿರಸಿ ಸಿದ್ದಾಪುರ ತಾಲ್ಲೂಕುಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಮಳೆಯ ಮುನ್ಸೂಚನೆ ಇದ್ದರೂ ಪೂರ್ವದ
ಗಾಳಿಯ ಒತ್ತಡ ಇದ್ದರೆ ಮಾತ್ರ ಮಳೆಯಾಗಬಹುದು. ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಸನ ಜಿಲ್ಲೆಗಳಲ್ಲಿ ಸಂಜೆ – ರಾತ್ರಿ ಮೋಡದ ವಾತಾವರಣ ಇರಲಿದ್ದು ಹೆಚ್ಚಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಸನ ಜಿಲ್ಲೆಗಳ ಒಳನಾಡಿಗೆ ಸಮೀಪದ ತಾಲ್ಲೂಕುಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಂಜೆ- ರಾತ್ರಿ ಸಾಧಾರಣ ಮಳೆ ಮುಂದುವರೆಯಬಹುದು. ರಾಮನಗರ ಚಾಮರಾಜನಗರ ತುಮಕೂರು ದಾವಣಗೆರೆ ಚಿತ್ರದುರ್ಗ ಜಿಲ್ಲೆಗಳಲ್ಲಿ ಇವತ್ತೂ ಉತ್ತಮ ಮಳೆಯ
ಮುನ್ಸೂಚನೆ ಇದೆ.ಮೈಸೂರು ಮಂಡ್ಯ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆ 2 ರಿಂದ ಮಳೆ ಕಡಿಮೆ ಆಗಲು ಪ್ರಾರಂಭವಾಗಬಹುದು.
ಉತ್ತರ ಒಳನಾಡಿನ ಬೆಳಗಾವಿ ಧಾರವಾಡ ಗದಗ ಹಾವೇರಿ ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸಂಜೆ – ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುಂದುವರೆಯಬಹುದು. ಉಳಿದ ಜಿಲ್ಲೆಗಳಲ್ಲಿ ಭಾಗಷಃ ಮೋಡದ ವಾತಾವರಣ ಮುಂದುವರೆಯಬಹುದು.
ಮುಂಗಾರು ಭಾರತದಿಂದ ಬಹುತೇಕ ನಿರ್ಗಮಿಸಿದ್ದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಭಾರತದ ಪಶ್ಚಿಮದಿಂದ ಪೂರ್ವಕ್ಕೆ ಗಾಳಿ ಬೀಸಲು ಪ್ರಾರಂಭವಾಗಿದೆ.ಅರಬ್ಬೀಸಮುದ್ರದ ಗಾಳಿ ದಕ್ಷಿಣ ತಮಿಳುನಾಡು ಮೂಲಕ ಪ್ರವೇಶಿಸುತ್ತಿದ್ದು ಕೇರಳ ತಮಿಳುನಾಡು ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಅಕ್ಟೋಬರ್ 10ರ ನಂತರ ಆರಂಭವಾಗುವ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ನಿನ್ನೆ ಒಣಹವೆ ವಾತಾವರಣ ಇತ್ತು. ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಹಾಸನ ಜಿಲ್ಲೆಗಳ ಒಳನಾಡಿಗೆ ಸಮೀಪದ ಪ್ರದೇಶಗಳಲ್ಲಿ ಮಳೆಯಾಗಿದ್ದು ಕಡೂರು ತಾಲ್ಲೂಕಿನಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಮಳೆಯಾಗಿದ್ದು ಚಾಮರಾಜನಗರ ರಾಮನಗರ ತುಮಕೂರು ಚಿತ್ರದುರ್ಗ ದಾವಣಗೆರೆ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ನಿನ್ನೆ ಮಳೆಯಾಗಿದೆ.ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಡಲಗಿ ತಾಲ್ಲೂಕುಗಳಲ್ಲಿಯೂ ಉತ್ತಮ ಮಳೆಯಾಗಿದೆ.









