ಮಂಗಳೂರು: ಸೆ.28ರಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಸಹಿತ ಉತ್ತಮ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗಾಳಿ ಗುಡುಗು, ಸಿಡಿಲು ಸಹೀತ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಳ್ಯ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಮತ್ತು ರಾತ್ರಿ ಮಳೆಯಾಗಿತ್ತು.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.