ಮಂಗಳೂರು: ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಸೂಚನೆ ನೀಡಿದೆ. ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಲಕ್ಷಣ ಕಂಡು ಬಂದಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸುಳ್ಯ ಸೇರಿ ವಿವಿಧೆಡೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಸುಳ್ಯದಲ್ಲಿ ಕಳೆದ ರಾತ್ರಿ ಕೆಲವಡೆ ಸಾಮಾನ್ಯವಾಗಿ ಮಳೆಯಾಗಿತ್ತು. ಮಂಗಳವಾರ ಸಂಜೆ ಹಾಗೂ ರಾತ್ರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.