ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19ರಿಂದ 3 ದಿನಗಳ ಕಾಲ
ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ನ.19ರ ಬಳಿಕ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಇಂದಿನಿಂದಲೇ ಮಳೆ ಆರಂಭವಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





