ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ, ತಾಪಮಾನದಲ್ಲಿ ಏರಿಕೆ ಕಂಡರೂ ಎಲ್ಲೂ ಮಳೆಯಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ, ಸಾಮಾನ್ಯವಾಗಿ ತಾಪಮಾನ ಏರಿಕೆಯಾಗುತ್ತಿದ್ದಂತೆ
ಮಳೆ ಬರುವುದು ವಾಡಿಕೆ, ಒಂದೆರಡು ಕಡೆ ಸಾಮಾನ್ಯ ಮಳೆಯಾಗಿದ್ದು ಬಿಟ್ಟರೆ ಇನ್ನೇಲ್ಲೂ ಮಳೆಯಾಗಿಲ್ಲ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ.
ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹೇಳಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣತೆ ಹೆಚ್ಚಾಗಲಿದೆ.
ಬೆಂಗಳೂರು ಸಢರಿ ಕೆಲವು ಕಡೆ ಮೋಡಕವಿದ ವಾತಾವರಣವಿರಲಿದೆ ಎಲ್ಲೆಡೆ ಏರಿದ ಉಷ್ಣಾಂಶ ಇರಲಿದೆ ಎಂದು ಇಲಾಖೆ ಸೂಚನೆ ನೀಡಿದೆ.