ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು ಸುಡು ಬಿಸಿಲಿನಿಂದ ಕಾದಿದ್ದ ಇಳೆ ಕೊಂಚ ತಂಪಾಗಿದೆ. ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಹಲವೆಡೆ ಗುರುವಾರ ಗುಡುಗು, ಮಿಂಚು ಸಹಿತ ಜೋರು ಮಳೆಯಾಯಿತು. ಶಿವಮೊಗ್ಗದಲ್ಲಿ ಗುರುವಾರ ಸಂಜೆ 20 ನಿಮಿಷಕ್ಕೂ ಅಧಿಕ ಕಾಲ ಮಳೆ ಸುರಿದಿದೆ. ಪ್ರಸಕ್ತ ವರ್ಷದ
ಮೊದಲ ಮಳೆಯಾಗಿದೆ. ಸಂಜೆ ಸುರಿದ ಮಳೆ ಇಳೆಗೆ ತಂಪೆರೆಯಿತು. ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆ ವಿವಿಧೆಡೆ ಗುರುವಾರ ಗುಡುಗು ಸಹಿತ ಮಳೆಯಾಯಿತು. ಕೊಡಗು ಜಿಲ್ಲೆಯ ಕೆಲವೆಡೆ ಮಳೆಯಾಗಿದೆ
ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಪರೀತ ಸೆಕೆ ಮುಂದುವರೆದಿದೆ,ಇಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.