ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆಯ ವೇಳೆಗೆ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗಿದೆ. ಕತ್ತಲು ಕವಿದಿದ್ದು ವಿವಿಧೆಡೆ ಮಳೆಯಾಗುತಿದೆ. ಈ ಮಧ್ಯೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ
ಅ.18ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.ಈ ಅವಧಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಎಚ್ಚರಿಸಿದೆ.















