ಸುಳ್ಯ: ಸುಳ್ಯ ನಗರ ಸೇರಿ ವಿವಿಧ ಕಡೆಗಳಲ್ಲಿ ಸೋಮವಾರ ಸಂಜೆ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನ ತನಕ ಬಿಸಿಲಿನ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಮೋಡ ಕವಿದು ಸಂಜೆಯ ವೇಳೆಗೆ ಸಾಧಾರಣ ಮಳೆಯಾಗಿದೆ.ರಾಜ್ಯದ ವಿವಿಧಡೆ ಅ.17ರ ತನಕ ಗುಡುಗು ಸಹಿತ
ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಬಹುತೇಕ ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳ ನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.