ಸುಳ್ಯ: ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು ಸುಳ್ಯ ತಾಲೂಕು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಸುಳ್ಯದಲ್ಲಿ ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನದ ವೇಳೆಗೆ ಮಳೆಯಾಗಿದೆ. ಸಂಜೆಯಿಂದ ಮತ್ತೆ ಮಳೆಯಾಗಿದೆ ಕೆಲವಡೆ ತುಂತುರು ಮಳೆಯಾದರೆ ಕೆಲವೆಡೆ ಉತ್ತಮ ಮಳೆಯಾಗಿದೆ. ರಾಜ್ಯದಾದ್ಯಂತ
ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಿದೆ.ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಶನಿವಾರ, ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರು ನಗರ ಮತ್ತು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ (40–50 ಕಿ.ಮೀ ) ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.
ಉಳಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.