ಸುಳ್ಯ:ಕೆಲವು ದಿನಗಳ ಬಿಡುವಿನ ಬಳಿಕ ಮಳೆ ಮತ್ತೆ ಬಿರುಸುಗೊಂಡಿದೆ. ಮಂಗಳವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ವಿವಿಧ ಭಾಗಗಳು ಸೇರಿ ವಿವಿದೆಡೆ ಮಳೆಯಾಗಿದೆ. ರಾತ್ರಿಯೂ ಮಳೆ ಮುಂದುವರಿದಿದಿದ್ದು ಬುಧವಾರ ಬೆಳಿಗ್ಗಿನಿಂದ ಮಳೆ ಸುರಿಯುತಿದೆ.ರಾಜ್ಯದ ಎಲ್ಲೆಡೆ
ಬುಧವಾರ ಮತ್ತು ಗುರುವಾರ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯ ಮುನ್ಸೂಚನೆ ನೀಡಲಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.












