ಬೆಂಗಳೂರು: ರಾಜ್ಯದ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ
ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಈ ಜಿಲ್ಲೆಗಳ ಕೆಲವೆಡೆ ಇದೇ 27ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 24ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲಿಯವರೆಗೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.















