ಬೆಂಗಳೂರು: ರಾಜ್ಯದಲ್ಲಿ ಕೆಲವೆಡೆ ಮಳೆಯಾಗಲಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಡಿ.3 ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಕರಾವಳಿ ಜಿಲ್ಲೆಗಳಲ್ಲಿ , ದಕ್ಷಿಣ ಒಳಬಾಡು ಪ್ರದೇಶಗಳಲ್ಲಿ ಮೂರು
ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಮತ್ತು ಬೆಂಗಳೂರು ಸೇರಿದಂತೆ ಈ ಜೆಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಿದ್ದು, ತಾಪಮಾನ ಕಡಿಮೆಯಾಗಿದೆ. ಮಳೆಯಿಂದಾಗಿ ಈ ಭಾಗದಲ್ಲಿ ಏಕಾಏಕಿ ಚಳಿ ಜಾಸ್ತಿಯಾಗಿದೆ.ಗುಜರಾತ್ನ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದಿದೆ.





