ಬೆಂಗಳೂರು:ರಾಜ್ಯದ ಕೆಲವೆಡೆ ಬುಧವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆ ಮತ್ತು
ಬಿರುಗಾಳಿ (30-40 ಕಿ.ಮೀ. ವೇಗ) ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಂಭವವಿದೆ ಎಂದು ಹೇಳಿದೆ.
24 ರಿಂದ 27ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳು ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.