ಮಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮತ್ತಷ್ಟು ಬಿರುಸುಗೊಂಡಿದೆ. ಇಂದಿನಿಂದ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಳ್ಯ ತಾಲೂಕಿನಾದ್ಯಂತ ಎಡೆ ಬಿಡದೆ ಮಳೆ ಸುರಿಯುತಿದೆ. ಕತ್ತಲು ಕವಿದ ವಾತಾವರಣ ಇದ್ದು ಕುಂಭದ್ರೋಣ ಮಳೆಯಾಗುತಿದೆ.ರಾತ್ರಿ ಪೂರ್ತಿ
ನಿರಂತರ ಮಳೆ ಸುರಿದಿದ್ದು ಹಳ್ಳ, ಕೊಳ್ಳ, ನದಿ ತೋಡುಗಳು ತುಂಬಿ ಹರಿಯುತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭರ್ಜರಿ ಮಳೆ ಮುಂದುವರಿದಿದೆ.ಮಳೆ ಮತ್ತಷ್ಟು ಬಿರುಸುಗೊಳ್ಳವ ಸೂಚನೆಯಿದ್ದು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಕೂಡ ಮಳೆಯಾಗಲಿದೆ.












