ಬೆಂಗಳೂರು: ಕರ್ನಾಟಕದೆಲ್ಲೆಡೆ ಮತ್ತೆ ಮಳೆಯ ಅಬ್ಬರ ಜೋರಾಗುವ ಮುನ್ಸೂಚನೆಯಿದ್ದು,ಆಗಸ್ಟ್ 10ರವರೆಗೂ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ,ತುಮಕೂರು,
ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ನಗರ,ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸುಳ್ಯ ತಾಲೂಕಿನಲ್ಲಿಯೂ ಕಳೆದ ಕೆಲವು ದಿನಗಳಿಂದ ಮಳೆ ಕಡಿಮೆಯಾಗಿದ್ದು ಬಿಸಿಲಿನ ವಾತಾವರಣ ಇತ್ತು. ಭಾನುವಾರ ಹಗಲು ಬಿಸಿಲಿನ ವಾತಾವರಣ ಇದ್ದು ಸಂಜೆ ಉತ್ತಮ ಮಳೆಯಾಗಿದೆ.





