ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರಲಿದೆ. ತಮಿಳುನಾಡು ಹಾಗೂ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಕೆಲವಢೆ ತುಂತುರು ಮಳೆಯಾಗಿದೆ.














