ಬೆಂಗಳೂರು:ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೆ. 22 ರವರೆಗೆ ಮಳೆ
ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಸೂಚನೆ ಇದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ, ತುಮಕೂರು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯಾಗಲಿದೆ ಎಂಬ ಸೂಚನೆ ಇದೆ.





