ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು ಭಾರಿ ಮಳೆ ಸಂಭವವಿರುವ ಕಾರಣ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಜೂ.8,9 ರಂದು ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ
ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್. ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.