ಬೆಂಗಳೂರು:ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಅಲ್ಲಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ
ಮೋಡ ಕವಿದ ವಾತಾವರಣ ಇರಲಿದೆ.ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ ಎಂದು ಮುನ್ಸೂಚನೆ ಇದೆ







