ಸುಳ್ಯ: ಬಿಸಿಲ ಬೇಗೆ ಹಾಗೂ ಉರಿ ಸೆಕೆಯಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ. ರಾತ್ರಿ ಸುಮಾರು ಎಂಟು ಗಂಟು ಗಂಟೆಯಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆಯಾಗಿದೆ. ಸುಳ್ಯ ನಗರ ಹಾಗೂ ಇತರ ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು
ವ್ಯಾಪ್ತಿಯ ಜಿಲ್ಲೆಗಳಲ್ಲಿ ಶನಿವಾರದಿಂದ ಮೋಡ ಕವಿದ ವಾತಾವರಣ ಇರಲಿದ್ದು ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಈ ಮಧ್ಯೆ ನೈಋತ್ಯ ಮುಂಗಾರು ಸೆಪ್ಟೆಂಬರ್ 25ರಿಂದ ತೀವ್ರತೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಜೂನ್ 1ರಿಂದ ಕೇರಳದ ಮೂಲಕ ನೈಋತ್ಯ ಮುಂಗಾರಿನ ಪ್ರವೇಶವಾಗುತ್ತದೆ. ಜುಲೈ 8ರ ವೇಳೆಗೆ ದೇಶದಾದ್ಯಂತ ಆವರಿಸುತ್ತದೆ. ಸೆಪ್ಟೆಂಬರ್ 17ರ ವೇಳೆಗೆ ವಾಯವ್ಯ ಭಾರತದಿಂದ ಕ್ಷೀಣಿಸಲು ಆರಂಭಿಸಿ, ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ತೀವ್ರತೆ ಕಳೆದುಕೊಳ್ಳುತ್ತದೆ.
ಈ ಬಾರಿ ಮುಂಗಾರು ಮಳೆಯ ಪ್ರಮಾಣದಲ್ಲಿ ತೀವ್ರ ಇಳಿಕೆ ಉಂಟಾಗಿದೆ. ಹಿಂಗಾರು ಮಳೆ ಹೆಚ್ಚು ಸುರಿಯುವ ನಿರೀಕ್ಷೆ ಇದೆ.