ಸುಳ್ಯ:ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆ ಹಾಗೂ ರಾತ್ರಿ ಉತ್ತಮ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಸುಳ್ಯ ನಗರದಲ್ಲಿ47 ಮಿ.ಮಿ.ಮಳೆಯಾಗಿದೆ.
ರಾಜ್ಯದ ಕೆಲವೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ ಜಿಲ್ಲೆ
ಸೇರಿ ಕರಾವಳಿಯ ವಿವಿಧ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.