ಸುಳ್ಯ:ಹಲವು ದಿನಗಳಿಂದ ಸುರಿಯದೆ ಮಂಕಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಎಲ್ಲೆಡೆ ಮುಂಗಾರು ಮಳೆ ಚುರುಕುಗೊಂಡಿದ್ದು ಸುಳ್ಯ ಸೇರಿ ವಿವಿಧ ಕಡೆಗಳಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ಉತ್ತಮ ಮಳೆಯಾಗುತಿದೆ.ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ
ವ್ಯಾಪಕ ಮಳೆಯಾಗುತ್ತಿದೆ.ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.






