ಬೆಂಗಳೂರು:ಕೆಲ ದಿನಗಳ ಬಿಡುವಿನ ಬಳಿಕ ಮಳೆ ಮತ್ತೆ ಚುರುಕಾಗುವ ಸಾಧ್ಯತೆ ಇದೆ.ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ ತಿಂಗಳ ಅಂತ್ಯದಲ್ಲಿ ರಾಜ್ಯಾದ ಕೆಲವೆಡೆ ಮಳೆ ಅಬ್ಬರಿಸಿತ್ತು, ಹಾನಿಗಳೂ ಉಂಟಾಗಿತ್ತು. ಈಗ ಕಳೆದ
ಎರಡು ಮೂರು ದಿನಗಳಿಂದ ಕೊಂಚ ಬಿಡುವು ಪಡೆದಿತ್ತು. ಇದೀಗ ಮತ್ತೆ ಮಳೆ ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ದೊರೆತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ. ರಾಜ್ಯದ ವಿವಿಧ ಕಡೆಗಳಲ್ಲಿ ನಿನ್ನೆ ಮಳೆಯಾಗಿದೆ.