ಬೆಂಗಳೂರು:ರಾಜ್ಯದ ವಿವಿಧೆಡೆ ಇಂದಿನಿಂದ ಒಂದು ವಾರ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 2ರವರೆಗೂ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದೂ ಇಲಾಖೆ ತಿಳಿಸಿದೆ.ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.







