ಸುಳ್ಯ:ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ತಾಪ ಏರುತ್ತಿದ್ದರೆ ಕೆಲವೆಡೆ ವರುಣ ತಂಪೆರೆದಿದೆ. ಬುಧವಾರ ಸಂಜೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ ಕೆಲವೆಡೆ ಮಳೆಯಾಗಿದೆ. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೆಲವೆಡೆ ಮಳೆ ಸಾಧಾರ ಮಳೆ ಸುರಿದಿದೆ.ಪುತ್ತೂರು ತಾಲೂಕಿನ
ಬೆಟ್ಟಂಪಾಡಿ, ಆರ್ಲಪದವು, ಕಬಕ ಮತ್ತಿತರ ಕಡೆ ಮಳೆಯಾದ ಬಗ್ಗೆ ವರದಿಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ಇತ್ತು. ಕಡಬ ತಾಲೂಕಿನ ಕೆಲವು ಭಾಗದಲ್ಲಿ ಕೆಲ ದಿನಗಳ ಹಿಂದೆ ಮಳೆಯಾಗಿತ್ತು.
ಮಲೆನಾಡಿನ ಕೆಲವೆಡೆ ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶವೂ ಏರಲಿದೆ.






