ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ರಾಜ್ಯದ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕಳೆದ 24 ಗಂಟೆಯಲ್ಲಿ ಸುಳ್ಯ, ಪುತ್ತೂರು, ಕಾರ್ಕಳ, ಧರ್ಮಸ್ಥಳ, ಉಡುಪಿ, ಮಾಣಿ, ಕುಂದಾಪುರ, ಕೋಟ, ಮಂಗಳೂರು, ಬೆಳ್ತಂಗಡಿ, ಗೇರುಸೊಪ್ಪ,, ಶೃಂಗೇರಿ, ಮಂಗಳೂರು ವಿಮಾನ ನಿಲ್ದಾಣ, ಉಪ್ಪಿನಂಗಡಿ ಸಿದ್ದಾಪುರ, ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಬೀದರ್, ಮಡಿಕೇರಿ, ಗೋಣಿಕೊಪ್ಪಲು ಸೇರಿ ರಾಜ್ಯದ ವಿವಿಧೆಡೆ ಮಳೆಯಾಗಿದೆ.