ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಮಳೆಯಾಗಿದ್ದು, ಇಂದೂ ಕೂಡ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ರಾಜ್ಯದ ವಿವಿಧೆಡೆ ಇಂದು ಗುಡುಗು
ಮಿಂಚು ಸಹಿತ ಸಾಧಾರಣ ಮಳೆಯಾಗುವ ಸೂಚನೆ ಇದೆ. ಕರಾವಳಿಯ ವಿವಿಧೆಡೆ ಭಾನುವಾರ ಮತ್ತು ಸೋಮವಾರ ಮಿಂಚು ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 26ರವರೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಒಣಹವೆ ಇರಲಿದ್ದು ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ಎಲ್ಲಾ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆ ಪ್ರಮಾಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.