ಮಂಗಳೂರು: ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಸೋಮವಾರ ಬೆಳಗ್ಗಿನಿಂದ ಭಾರೀ ಮಳೆಯಾಗುತಿದೆ. ಎಡೆಬಿಡದೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜೂ.10 ಮತ್ತು 11ರಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಗುಡುಗು ಸಹಿತ ಭಾರಿ
ಮಳೆಯ ಮುನ್ಸೂಚನೆ ನೀಡಿದೆ. ಅದಲ್ಲದೆ ಜೂ.12ರಂದು ಆರೆಂಜ್, ಜೂ.13 ಮತ್ತು 14ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ವಿವಿಧ ಕಡೆ ಉತ್ತಮ ಮಳೆಯಾಗಿದೆ. ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.







