ಸುಳ್ಯ:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ
ರಾಜ್ಯದ ವರುಣಾಗಮನ ಆಗಿದೆ. ಸಬ್ರಹ್ಮಣ್ಯ, ಬೆಳ್ತಂಗಡಿಯ ಕೆಲವು ಭಾಗ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ತುಂತುರು ಮಳೆ ಸುರಿದಿದೆ. ಏಪ್ರಿಲ್ 20ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ
ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಶಿವಮೊಗ್ಗ, ಶೃಂಗೇರಿ, ತೀರ್ಥಹಳ್ಳಿ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗಿದೆ. ಭಾಲ್ಕಿ, ಮುಂಡಗೋಡ, ಹುಮುನಾಬಾದ್, ಬೀದರ್, ಬೆಳಗಾವಿ, ನರಗುಂದ, ಕಕ್ಕೇರಿ, ಅಥಣಿ, ಯಲಬುರ್ಗಾ, ಜಯಪುರ, ಬಾಳೆಹೊನ್ನೂರು, ನಾಪೋಕ್ಲು, ತ್ಯಾಗರ್ತಿ, ಮೈಸೂರಿನಲ್ಲಿ ಮಳೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.