ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಶುಕ್ರವಾರ ಸಂಜೆಯಿಂದ ಉತ್ತಮ ಮಳೆಯಾಗಿದೆ.ಸುಳ್ಯ ನಗರ, ಕಲ್ಮಡ್ಕ, ಕಲ್ಲಾಜೆ, ಎಣ್ಮೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಗುಡುಗು, ಗಾಳಿ ಸಮೇತ ಗಾಳಿ ಸಮೇತ ಉತ್ತಮ ಮಳೆಯಾಗಿರುವ ವರದಿಯಿದೆ. ಜಿಲ್ಲೆಯ ವಿವಿಧ
ಭಾಗಗಳಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆಯು ಅಲ್ಲಲ್ಲಿ ರಭಸದಿಂದ ಸುರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಸ್ಥಳದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.