ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ 6 ಗಂಟೆಯಿಂದ ವಿವಿಧ ಕಡೆಗಳಲ್ಲಿ ಮಳೆ ಸುರಿದಿದೆ. ಬಿಸಿಲಿನ ಬೇಗೆಗೆ ಮತ್ತು ಏರಿದ ಉಷ್ಣಾಂಶದಿಂದ ಬಸವಳಿದಿರುವ ಇಳೆಗೆ ಮಳೆ ತಂಪೆರೆದಿದೆ. ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಮಳೆಯಾಗುತಿದೆ. ಸುಳ್ಯ ನಗರದಲ್ಲಿ
ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲು ಹಾಗು ಗಾಳಿಯ ಅಬ್ಬರದೊಂದಿಗೆ ತಾಲೂಕಿನ ವಿವಿಧೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾದರೆ ಕೆಲವೆಡೆ ಉತ್ತಮ ಮಳೆಯಾಗಿದೆ. ಸುಳ್ಯ ನಗರದಲ್ಲಿ ಸರಿಯಾದ ಚರಂಡಿಗಳಿಲ್ಲದ ಕಾರಣ ಮಳೆ ನೀರು ರಸ್ತೆಯಲ್ಲಿಯೇ ಹರಿಯುವುದು, ರಸ್ತೆಯಲ್ಲಿ ಅಲ್ಲಲ್ಲಿ ಕೆಸರು ಮಿಶ್ರಿತ ಮಳೆ ನೀರು ನಿಂತಿರುವುದು ಕಂಡು ಬಂತು. ಬೇಸಿಗೆಯ

ಬಿಸಿಲು ತೀವ್ರವಾಗಿದ್ದರೂ, ಕೆಲ ಭಾಗಗಳಲ್ಲಿ ಮಳೆಯಾಗಿರುವುದು ತಂಪೆರೆರೆದಿದೆ. ತಾಲೂಕಿನ ಸುಳ್ಯ ನಗರ ಮಾತ್ರವಲ್ಲದೆ ಕರಿಕ್ಕಳ,ಹರಿಹರ ಪಲ್ಲತಡ್ಕ, ಮುಪ್ಪೇರಿಯಾ ಸೇರಿ ವಿವಿದಢೆ ಮಳೆಯಾಗಿದೆ. ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿಯೂ ಮಳೆಯಾಗಿದೆ.
ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.











