ಸುಳ್ಯ: ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ. ಗುರುವಾರ ಹಗಲಿನ ವೇಳೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.ಕಳೆದ ಒಂದು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ಮುಂಗಾರು
ದುರ್ಬಲವಾಗಿ ಮುಂದುವರಿದಿದೆ. ಆಗೊಮ್ಮೆ ಈಗೊಮ್ಮೆ ಸಾಮಾನ್ಯ ಮತ್ತು ತುಂತುರು ಮಳೆಯಾಗುತ್ತಿತ್ತು. ಬಿರು ಬಿಸಿಲಿನ ಮತ್ತು ಉರಿ ಸೆಕೆಯ ವಾತಾವರಣವಿತ್ತು.
ವಾರಗಳ ಕಾಲ ಮಳೆ ಸಾಧ್ಯತೆ:
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.