ಸುಳ್ಯ: ಸುಳ್ಯದಲ್ಲಿ ಮಂಗಳವಾರ ಸಂಜೆಯ ವೇಳಗೆ ಸಾಧಾರಣ ಮಳೆ ಸುರಿದಿದೆ. ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸುರಿದಿದೆ.ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ
ಧಾರಾಕಾರ ಮಳೆಯಾಗುತಿದೆ. ತಮಿಳುನಾಡಿನ ಕರಾವಳಿಯ ಮೇಲ್ಮೈ ಸುಳಿಗಾಳಿ, ನೈರುತ್ಯ ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ರಾಜಸ್ಥಾನದಿಂದ ಈಶಾನ್ಯ ಭಾಗದವರೆಗೂ ತಗ್ಗಿದ ಸುಳಿಗಾಳಿ ಇರುವ ಪರಿಣಾಮ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳೂ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅ.13ರ ವರೆಗೆ ಮಳೆ ಮುಂದುವರಿಯಲಿದ್ದು,ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.