ಸುಳ್ಯ: ಸುಳ್ಯದಲ್ಲಿ ಕಳೆದ 24 ಗಂಟೆಯಲ್ಲಿ 55 ಮಿ.ಮಿ.ಮಳೆಯಾಗಿದೆ ಎಂದು ಸುಳ್ಯದಲ್ಲಿ ಮಳೆ ದಾಖಲೆ ಮಾಡುವ ಶ್ರೀಧರ ರಾವ್ ಹೈದಂಗೂರು ತಿಳಿಸಿದ್ದಾರೆ.ಸುಳ್ಯದಲ್ಲಿ ಶುಕ್ರವಾರ ಸಂಜೆ ಭರ್ಜರಿ ಮಳೆ ಸುರಿದಿದೆ
ಸುಮಾರು ಒಂದೂವರೆ ಗಂಟೆಗಳ ಕಾಲ ಭರ್ಜರಿ ಮಳೆ ಸುರಿಯಿತು. ಗುಡುಗು ಮಿಂಚಿನ ಅಬ್ಬರದೊಂದಿಗೆ
ಭಾರೀ ಮಳೆಯಾಗಿದೆ. ಸಂಜೆ 6 ಗಂಟೆಯ ವೇಳೆಗೆ ಆರಂಭವಾದ ಮಳೆ ರಾತ್ರಿ 8ಗಂಟೆಯ ತನಕ ಮುಂದುವರಿದಿತ್ತು.ರಾಜ್ಯದ ವಿವಿದೆಡೆ ಮಳೆಯಾಗುವ ಸಾಧ್ಯೆತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












