ಸುಳ್ಯ: ಸುಳ್ಯ ನಗರ ಹಾಗೂ ಪರಿಸರದಲ್ಲಿ ಜಿಟಿ ಜಿಟಿ ಮಳೆಯ ಸಿಂಚನ. ಗುರುವಾರ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನದ ಬಳಿಕ ವಿವಿಧ ಕಡೆಗಳಲ್ಲಿ ಹನಿ ಮಳೆಯಾಗಿದೆ. ಸುಳ್ಯ ನಗರ, ಮಂಡೆಕೋಲು, ಜಾಲ್ಸೂರು ಗ್ರಾಮದ ಕೆಲವೆಡೆ ಸೇರಿ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಕೆಲ ಹೊತ್ತು ಹನಿ ಮಳೆ ಬಂದರೆ ಕೆಲವು ಕಡೆ ಮಳೆಯಾಗಿದೆ. ಕೆಲವೆಡೆ ಹನಿ ಮಳೆ, ಕೆಲವು ಕಡೆ ಸಾಧಾರಣ
ಮಳೆ ಬಂದಿದೆ.
ಬುಧವಾರ ರಾತ್ರಿ ಸುಳ್ಯ ಹಾಗೂ ಕಡಬ ತಾಲೂಕು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು ಸಿಡಿಲಿನ ಅಬ್ಬರ ಮತ್ತು ಗಾಳಿಯೊಂದಿಗೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎರಡು ದಿನದಿಂದ ಮೋಡ ಕವಿದ ವಾತಾವರಣ ಇದ್ದರೂ ಉಷ್ಣಾಂಶ ಏರಿಕೆಯಾಗಿದ್ದು ವಿಪರೀತ ಸೆಕೆ ಇತ್ತು.
ಇಂದಿನ ಹವಾಮಾನ ವರದಿ:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.