ಸುಳ್ಯ: ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಗುರುವಾರ ಸಂಜೆ ಭಾರೀ ಮಳೆಯಾಗಿದೆ. ಸುಳ್ಯದಲ್ಲಿ ಸಂಜೆ 5 ಗಂಟೆಯ ವೇಳೆಗೆ ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿಯಿತು.ಬೆಳ್ಳಾರೆಯಲ್ಲಿಯೂ ಉತ್ತಮ
ಮಳೆಯಾಗಿದೆ. ಮಳೆಗೆ ಬೆಳ್ಳಾರೆ ಪೇಟೆಯಲ್ಲಿ ಮಳೆ ನೀರು ತುಂಬಿ ಹರಿಯಿತು. ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲಿಯೇ ಹರಿಯುವುದು ಕಂಡು ಬಂತು. ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆ ಸುರಿದಿದೆ. ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸುಳ್ಯ ನಗರ ಸೇರಿ ವಿವಿಧ ಭಾಗಗಳಲ್ಲಿ ನಿರಂತರ ಮೂರನೇ ದಿನವೂ ಉತ್ತಮ ಮಳೆಯಾಗಿದೆ.