ಸುಳ್ಯ:ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಗುರುವಾರ ರಾತ್ರಿ ಮಳೆ ಸುರಿದಿದೆ. ವಿವಿಧೆಡೆ ಉತ್ತಮ ಮಳೆಯಾಗಿ ತಂಪೆರೆದಿದೆ.ಶುಕ್ರವಾರ ಬೆಳಿಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ
4 ದಿನ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಮೇ. 25ರವರೆಗೆ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬ ಸೂಚನೆ ಇದೆ.













