ಸುಳ್ಯ:ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಸುಬ್ರಹ್ಮಣ್ಯ, ಗುತ್ತಿಗಾರು, ಬಳ್ಪ, ಬೆಳ್ಳಾರೆ
ಸೇರಿ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಗುಡುಗು ಸಿಡಿಲಿನ ಅಬ್ಬರದೊಂದಿದೆ ಮಳೆಯಾಗಿದೆ. ಸುಳ್ಯ ತಾಲೂಕಿನ
ಕೊಲ್ಲಮೊಗ್ರು ಹರಿಹರ ಪಲ್ಲತಡ್ಕ, ಮಡಪ್ಪಾಡಿ,ಮುಪ್ಪೇರಿಯಾ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆ ಸುರಿದಿದೆ. ಸುಳ್ಯ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಹನಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿಯೂ ಮಳೆಯಾಗಿತ್ತು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಗುಡುಗು ಸಹೀತ ಮಳೆಯಾಗಬಹುದು ಎಂದು ಸೂಚನೆ ನೀಡಿತ್ತು.


















