ಸುಳ್ಯ: ಸುಳ್ಯದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ.
ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನದ ಬಳಿಕ ಮಳೆ ಆರಂಭಗೊಂಡಿದೆ. ವಿವಿಧ ಭಾಗಗಳಲ್ಲಿ ಗುಡುಗು ಸಹೀತ ಬಿರುಸಿನ ಮಳೆಯಾಗುತಿದೆ.ಭಾನುವಾರವೂ ಸುಳ್ಯ ನಗರ ಸೇರಿ
ವಿವಿಧ ಕಡೆ ಸಾಧಾರಣ ಮಳೆಯಾಗಿದೆ. ರಾಜ್ಯದ ವಿವಿಧೆಡೆ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ
ಮಳೆಯಾಗಗಲಿದೆ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಸಾಧಾರಣದಿಂದ ಉತ್ತಮ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.