ಸುಳ್ಯ: ಸುಳ್ಯ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಬೆಳಗ್ಗಿನ ಜಾವ ನಾಲ್ಕು ಗಂಟೆಯ ವೇಳೆ ಆರಂಭವಾದ ವರ್ಷಧಾರೆ 6 ಗಂಟೆಯ ತನಕ ಮುಂದುವರಿಯಿತು. ಸುಳ್ಯ ನಗರ ಹಾಗೂ
ಗ್ರಾಮೀಣ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಭರ್ಜರಿ ಮಳೆ ಸುರಿದಿದೆ. ಕೆಲವೆಡೆ ಮಳೆ ಈಗಲೂ ಮುಂದುವರಿದಿದ್ದು, ಎಲ್ಲೆಡೆ ಮೋಡ ಕವಿದ ವಾತಾವರಣ ಇದ್ದು ಮಳೆಗಾಲದ ವಾತಾವರಣ ಉಂಟಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಭಾನುವಾರ ಸಂಜೆ ಮಳೆಯಾಗಿತ್ತು.ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದ್ದರೆ ಮೈಸೂರು ಸುತ್ತಮುತ್ತ ಹಾಗೂ ಹಾಸನ ಜಿಲ್ಲೆಯಾದ್ಯಂತ ಭಾನುವಾರ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆ ಸುರಿದಿದ್ದು,
ಹಾಸನ, ಅರಸೀಕೆರೆ, ಅರಕಲಗೂಡು, ಚನ್ನರಾಯಪಟ್ಟಣದಲ್ಲಿ ಸಾಮಾನ್ಯ ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ,ಕಡಬ ಹಳಿಯಾಳ, ಸಂಕೇಶ್ವರ, ಜಯಪುರ, ಬೆಳಗಾವಿ ಪಿಟಿಒ, ಕುಕನೂರು, ಮುನಿರಾಬಾದ್, ನಿಪ್ಪಾಣಿ, ಬಂಡೀಪುರ, ಭಾಗಮಂಡಲ, ಪೊನ್ನಂಪೇಟೆ, ಕಿರವತ್ತಿ, ಕೋಟ, ದೇವರಹಿಪ್ಪರಗಿ, ಅಣ್ಣಿಗೆರೆ, ಕಲಘಟಗಿ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಹಗರಿಬೊಮ್ಮನಹಳ್ಳಿ, ಕಳಸ, ಬೇಗೂರು, ವಿರಾಜಪೇಟೆ, ಉಡುಪಿ, ಮುಂಡಗೋಡು, ಪುತ್ತೂರು, ಚಿಕ್ಕೋಡಿ, ಧಾರವಾಡ, ವಿಜಯಪುರ, ಇಂಡಿ, ದೇವದುರ್ಗ, ಕಡೂರು,ಹರಪನಹಳ್ಳಿ, ಬೆಂಗಳೂರಿನಲ್ಲಿ ಮಳೆಯಾಗಿದೆ.
ಕರ್ನಾಟಕದಾದ್ಯಂತ ಇಂದು ಕೂಡ ಮಳೆ ಮುಂದುವರೆಯಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ 15ಕ್ಕೂ ಹೆಚ್ಚಿನ ಕಡೆಗಳಲ್ಲಿ ಅಧಿಕ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ.
ಕೆಲವೆಡೆ ಬಿರುಗಾಳಿ, ಗುಡುಗು, ಸಿಡಿಲು ಸಹೀತ ಮಳೆಯಾಗಲಿದೆ.