ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಎ.8 ರಂದು ಸಂಜೆಯ ವೇಳೆಗೆ ಮಳೆಯಾಗಿದ್ದು ಕೆಲವಡೆ ಸುಮಾರು ಅರ್ಧ ಗಂಟೆಗಳ ಕಾಲ ಉತ್ತಮ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ
ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು ಸಿಡಿಲು ಸಹೀತ ಮಳೆಯಾಗಿದೆ. ಕೆಲವೆಡೆ ಉತ್ತಮ ಮಳೆಯಾದರೆ ಕೆಲವೆಡೆ ಸಾಮಾನ್ಯ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕತ್ತಲು ಕವಿದ ವಾತಾವರಣ ಇದ್ದು ಉತ್ತಮ ಮಳೆ ಸುರಿದಿದೆ. ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆ ಸುರಿದ ಬಗ್ಗೆ ಮಾಹಿತಿಯಿದೆ.