ಸುಳ್ಯ:ಮುಂಗಾರು ಮಳೆ ಬಿರುಸುಗೊಂಡಿದ್ದು ಸುಳ್ಯದಲ್ಲಿ ಸತತ ಎರಡನೇ ದಿನವೂ ಉತ್ತಮ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ. ಸುಳ್ಯ ನಗರದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಎಡೆ ಬಿಡದೆ ಮಳೆ ಸುರಿದಿದೆ. ರಾಜ್ಯದ ವಿವಿಧ
ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಹನ್ನೆರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿತ್ತು. ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.