ಸುಳ್ಯ: ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಭಾನಿವಾರ ಸಂಜೆ ಮಳೆಯಾಗಿದೆ.ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆಸುಪಾಸಿನಲ್ಲಿ ಮಳೆ ಸುರಿದಿದೆ. ಸುಬ್ರಹ್ಮಣ್ಯ ,ಪಂಜ , ಹರಿಹರ, ಬಾಳುಗೋಡು ಗುತ್ತಿಗಾರು, ಕರಿಕ್ಕಳ ಸೇರಿದಂತೆ ವಿವಿಧ ಭಾಗದಲ್ಲಿ ಸಂಜೆ ವೇಳೆಯಲ್ಲಿ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣ ಇತ್ತು. ಗುಡುಗು, ಮಿಂಚಿನ ಅಬ್ಬರ ಇತ್ತು. ಕೆಲವೆಡೆ ಸಾಧಾರಣ ಮಳೆಯಾದರೆ ಕೆಲವೆಡೆ ಹನಿ ಮಳೆಯಾಗಿದೆ. ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿಯೂ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












