ಬೆಂಗಳೂರು: ದಕ್ಷಿಣ ಒಳನಾಡು ವ್ಯಾಪ್ತಿಯ ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಂಗಳವಾರ ಹಾಗೂ ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ
ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದೆ.ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ. ರಾಜ್ಯದಲ್ಲೇ ಗರಿಷ್ಠ ತಾಪಮಾನ ಸೋಮವಾರ ಕಲಬುರಗಿ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.