ಬೆಂಗಳೂರು:ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ
ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೆಲವಯ ಕಡೆ ಸಾಧಾರಣ ಮಳೆಯಾಗಲಿದೆ. ಸೋಮವಾರ ರಾತ್ರಿ ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳು ಸಹೀತ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು ಸಮೇತ ಮಳೆಯಾಗಿದೆ.