ಮಂಗಳೂರು: ಸಿನಿಮಾ ಚಿತ್ರೀಕರಣಕ್ಕಾಗಿ ಸೂಪರ್ ಸ್ಟಾರ್ ರಜಿನಿಕಾಂತ್ ಮಂಗಳೂರಿಗೆ ಆಗಮಿಸಿದ್ದಾರೆ. ಜೈಲರ್ ಎಂಬ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದಿಳಿದ ರಜಿನಿಕಾಂತ್ ಅವರನ್ನು ನೋಡಲು ಹಲವಾರು ಅಭಿಮಾನಿಗಳಿದ್ದರು. ಅಭಿಮಾನಿಗಳತ್ತ ಕೈಬೀಸಿ ನಗುತ್ತಾ ಕಾರು ಹತ್ತಿ ರಜಿನಿ ತೆರಳಿದ್ದಾರೆ. ಈ ವೀಡಿಯೋ ವೈರಲ್ ಆಗಿದೆ. ಜೈಲರ್ ಸಿನಿಮಾ ಚಿತ್ರೀಕರಣ ಪಿಲಿಕುಳ ಗುತ್ತು ಮನೆಯಲ್ಲಿ 2-3 ದಿನಗಳ ಕಾಲ ನಡೆಯಲಿದೆ ಎಂದು ತಿಳಿದು ಬಂದಿದೆ. ಶಿವರಾಜ್ ಕುಮಾರ್, ಮಲಯಾಳಂ ನಟ ಮೋಹನ್ ಲಾಲ್, ಹಿಂದಿಯ ಜಾಕಿಶರಫ್, ರಮ್ಯಾ ಕೃಷ್ಣನ್ ಮತ್ತಿತರ ಪ್ರಮುಖರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.