ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ಮುಖ್ಯಮಂತ್ರಿಯಾಗಿ ದಿಯಾ ಕುಮಾರಿ ಮತ್ತು ಪ್ರೇಮ ಚಂದ್ ಬೈರವ ಅವರು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು.










