ಸುಳ್ಯ:ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ಕೆ.ರಾಜು ಪಂಡಿತ್ ಅವರನ್ನು ಸರಕಾರ ನಾಮ ನಿರ್ದೇಶನ ಮಾಡಿದೆ. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ರಾಜು ಪಂಡಿತ್ ವಿವಿಧ ಸಂಘ ಸಂಸ್ಥೆಗಳಲ್ಲಿ ದುಡಿಯುತ್ತಿದ್ದಾರೆ. ಸುಳ್ಯದ ಶ್ರೀ ಶಾರದಾಂಬಾ ಸೇವಾ ಸಮಿತಿಯ
ಸಕ್ರೀಯ ಸದಸ್ಯರಾಗಿರುವ ರಾಜು ಪಂಡಿತ್ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ, ಸುಳ್ಯ ಶ್ರೀರಾಮ ಮಂದಿರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಚಾರ ಸಮಿತಿಯ ಸಂಚಾಲಕರಾಗಿ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ನ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷರಾಗಿದ್ದಾರೆ. ರಥಬೀದಿಯ ದಿ.ಕೋರನ್ ಪಂಡಿತ್ ಅವರ ಪುತ್ರ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿರುವ ರಾಜು ಪಂಡಿತ್ ಅವರನ್ನು ಇದೀಗ ನಗರ ಪಂಚಾಯತ್ ಸದಸ್ಯರಾಗಿ ಸರಕಾರ ನಾಮನಿರ್ದೇಶನ ಮಾಡಿದೆ.









